ಶಿವಮೊಗ್ಗದ ಸಬ್ ರಿಜಿಸ್ಟರ್ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ನೇತೃತ್ವದಲ್ಲಿ ಸಬ್ ರಿಜಿಸ್ಟ್ರಾರ್ ಮೇಲೆ ದಾಳಿ ನಡೆದಿದೆ.
ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ 7 ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.ಲೋಕಾಯುಕ್ತ ಚೌದರಿ ತಂಡದಿಂದ ಜಿಲ್ಲೆಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಸಬ್ ರಜಿಸ್ಟರ್ ಕಚೇರಿಯಲ್ಲಿ ಭ್ರಷ್ಟಾಚಾರ ನಿರಂತರ ದೂರು ಬಂದ ಹಿನ್ನಲೆಯಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಚೇರಿಯ ಎಲ್ಲ ದಾಖಲೆ ಮತ್ತು ಇಂದಿನ ಹಣಕಾಸಿನ ವ್ಯವಹಾರ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಸಬ್ ರಿಜಿಸ್ಟ್ರಾರ್ ಕಚೇರಿ ಎಪಿಎಂಸಿ ಮುಂಭಾಗದ ಕಟ್ಟಡಕ್ಕೆ ಸ್ಥಳಾಂತರಗೊಂಡಿತ್ತು.