ಕೆನರಾ ಬ್ಯಾಂಕ್‌ಗಳಲ್ಲಿ ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಸಲುವಾಗಿ ಅ. 24 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.


ಈ ಶಿಬಿರದಲ್ಲಿ ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಬ್ಯಾಂಕಿನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕಿçಯವಾಗಿರುವ ಖಾತೆಗಳಲ್ಲಿ ಹಣ ಮತ್ತು ಕ್ಷೆöÊಮ್ ಮಾಡದ ಠೇವಣಿಗಳನ್ನು ಕ್ಷೆöÊಮ್ ಮಾಡಬಹುದು. ಬ್ಯಾಂಕಿAಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ.

ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ಅಗತ್ಯ ಸಲಹೆಯನ್ನು ಪಡೆಯಬಹುದು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಈ ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *