ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಿಂಡದಹಳ್ಳಿ ಗ್ರಾಮದಲ್ಲಿನ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಖಚಿತ ಮಾಹಿತಿಯ ಬಂದ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಶ್ರೀ ಕೇಶವ್, ಪೊಲೀಸ್ ಉಪಾಧೀಕ್ಷಕರು, ಶಿಕಾರಿಪುರ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ಆರ್ ಆರ್ ಪಾಟೀಲ್ ಪಿಐ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ, ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಅಂದಾಜು ಮೌಲ್ಯ 35,000/- ರೂಗಳ 13 ಕೆಜಿ ತೂಕದ ಒಟ್ಟು 28 ಹಸಿ ಗಾಂಜಾ ಗಿಡಗಳನ್ನು ಅಮಾನತ್ತು ಪಡಿಸಿಕೊಂಡು, ಆರೋಪಿ ಬಸವರಾಜ್, 34 ವರ್ಷ ದಿಂಡದ ಹಳ್ಳಿ ಈತನನ್ನು ದಸ್ತಗಿರಿ ಮಾಡಿ, ಆರೋಪಿಯ ವಿರುದ್ಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆಃ 301/2025 ಕಲಂ 8C, 20 (a) (i) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
