ಶಿವಮೊಗ್ಗ :- ತೀರ್ಥಹಳ್ಳಿ ಪಟ್ಟಣದ ಸಮೀಪದಲ್ಲಿರುವ ಚಿಟ್ಟೆಬೈಲ್ ನ ಪ್ರಜ್ಞಾಭಾರತಿ ಪ್ರೌಡಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯ 14 ವರ್ಷದ ವಯೋಮಿತಿ ಒಳಗಿನ ವಿಭಾಗದಲ್ಲಿ ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ದೀಪಿಕಾ ಕೆ.ಎನ್. ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪತ್ರಕರ್ತ ನಾಗೇಶನಾಯ್ಕ ಹಾಗೂ ಶಕುಂತಲಾ ಇವರ ಪುತ್ರಿಯಾಗಿದ್ದು, ನ.10 ರಿಂದ ಮಂಡ್ಯದಲ್ಲಿರುವ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ ಭಾಗವಹಿಸಲಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.