ಬೆಂಗಳೂರು ಆ 23 ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಉತ್ಪಾದನಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘ ಶಿವಮೊಗ್ಗ ಇದರ ಆಡಳಿತ ಮಂಡಳಿಗೆ ಶ್ರೀ ಎಂ ರಮೇಶ್ ಶಂಕರಘಟ್ಟ ಇವರನ್ನು ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಸರ್ಕಾರವು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದ ವರೆಗೆ ನಾಮನಿರ್ದೇಶನ ಮಾಡಿ ಅಧಿಸೂಚನೆ ಹೊರಡಿಸಿದೆ.
ಎಂ ರಮೇಶ್ ಇವರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿ, ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಪರವಾಗಿ ಅಭಿನಂದನೆಗಳು.