ಶಿವಮೊಗ್ಗ ನಗರದಲ್ಲಿ ಸಂಚಾರ ದಟ್ಟಣೆ ಹಿನ್ನೆಲೆ ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ (Heavy Vehicle) ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ನಗರದ ಗೋಪಿ ಸರ್ಕಲ್‌ನಿಂದ ಜೆ.ಪಿ.ಎನ್‌ ರಸ್ತೆ, ಜ್ಯೂವೆಲ್‌ ರಾಕ್‌ ಹೊಟೇಲ್‌ ರಸ್ತೆ ಮಾರ್ಗವಾಗಿ ಕುವೆಂಪು ರಸ್ತೆವರೆಗೆ ಜೈಲ್‌ ರಸ್ತೆಯಿಂದ ಲಕ್ಷ್ಮೀ ಟಾಕೀಸ್‌ವರೆಗೆ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಈ ರಸ್ತೆಗಳು ಕಿರಿದಾಗಿದ್ದು ಭಾರಿ ವಾಹನಗಳ ಓಡಾಟದಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ಈ ಮಾರ್ಗದಲ್ಲಿ ಭಾರಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.