ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಧ್ವಜ ಬಿಡುಗಡೆ ಸಮಾರಂಭವನ್ನು ಡಿ.08 ರಂದು ಬೆಳಿಗ್ಗೆ 11 ಘಂಟೆಗೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದು, ಜಿಲ್ಲಾಧಿಕಾರಿಗಳು ಧ್ವಜ ಬಿಡುಗಡೆಗೊಳಿಸುವರು. ಈ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಮಾಜಿ ಸೈನಿಕರ ಅವಲಂಬಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *