ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಶಿಕಾರಿಪುರ ಪುರಸಭೆಯ ಮುಖ್ಯಾಧಿಕಾರಿಗಳಿಗೆ ತಿಳಿಸುವುದು.

ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸುವುದು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಯ ವತಿಯಿಂದ ಒಬ್ಬ ಜವಾಬ್ಧಾರಿಯುವ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಅವನ್ನು ಸ್ಥಳಾಂತರಿಸುವ ವೆಚ್ಛವನ್ನು ಆ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು. ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು ಎಂದು ಶಿರಾಳಕೊಪ್ಪ ಪುರಸಭೆಯ ಆಡಳಿತಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *