ಬೆಳಗಾವಿಯ ಸುವರ್ಣ ಸೌಧದ ಬಳಿ ‘ಕರುನಾಡ ರಕ್ಷಣಾ ವೇದಿಕೆ’ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಅವರ ಅಹವಾಲು ಸ್ವೀಕರಿಸಲಾಯಿತು.
ಕ.ರ.ವೇ ಬಹುಮುಖ್ಯ ಬೇಡಿಕೆಯಲ್ಲಿ ಒಂದಾದ ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈಗಾಗಲೇ ಶಿಕ್ಷಣ ಇಲಾಖೆಯಿಂದ ಗಡಿಭಾಗದ ಕನ್ನಡ ಶಾಲೆಗಳ ಮಕ್ಕಳಿಗೆ ಯಾವುದೇ ಕೊರತೆಯಾಗದಂತೆ ಹೊಸ ಕಾನೂನನ್ನು ತರಲಾಗಿದೆ ಎಂದು ತಿಳಿಸಿದೆನು.
ಸದಾ ನಾಡ ವಿರೋಧಿ ಚಟುವಟಿಕೆಯಲ್ಲಿ ತೊಡಗಿ ವಿಷಬೀಜ ಬಿತ್ತುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು (ಎಂ.ಇ.ಎಸ್) ನಿಷೇಧಿಸಬೇಕು ಎಂದು ಒತ್ತಾಯಿಸಿದರು. ಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂಬ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆನು.
ಈ ವೇಳೆ ಕರುನಾಡು ರಕ್ಷಣಾ ವೇದಿಕೆ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.