ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದ ವತಿಯಿಂದ ಬೆಳಗಾವಿ ಸುವರ್ಣಸೌಧದ ಬಳಿ ಹಮ್ಮಿಕೊಂಡಿದ್ದ “ನಮ್ಮ ಕನ್ನಡ ಶಾಲೆ ಉಳಿಸಿ ಅಭಿಯಾನ”ದ ಪ್ರತಿಭಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಅವರೊಂದಿಗೆ ಭೇಟಿ ನೀಡಿ, ಅಹವಾಲು ಸ್ವೀಕರಿಸಲಾಯಿತು.

ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. 1995 ರಿಂದ 2005 ರವರೆಗಿನ ಕನ್ನಡ ಶಾಲೆಗಳು ಮತ್ತು ಕಾಲೇಜುಗಳಿಗೆ ವೇತನಾನುದಾನ ನೀಡುವ ಬೇಡಿಕೆ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ, ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡುವ ಪ್ರಮಾಣಿಕ ಪ್ರಯತ್ನದಿಂದ ನಿಮ್ಮ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದೆನು.

ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಶ್ರೀ ಪುಟ್ಟಣ್ಣ, ಶ್ರೀ ಎಸ್.ವಿ ಸಂಕನೂರ, ಶ್ರೀ ಡಿ.ಟಿ ಶ್ರೀನಿವಾಸ್, ಹಣಮಂತ ನಿರಾಣಿ, ಶ್ರೀ ಧನಂಜಯ್ ಸರ್ಜಿ ಸೇರಿದಂತೆ ಸಂಘದ ಅಧ್ಯಕ್ಷರು, ಪಧಾಧಿಕಾರಿಗಳು ಹಾಗೂ ರಾಜ್ಯದ ವಿವಿಧ ಜಿಲ್ಲೆಯ ಶಿಕ್ಷಕರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *