ಶಿವಮೊಗ್ಗ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಸಾಧಕ ಮಹಿಳಾ ಉದ್ಯಮಿ ಪ್ರಶಸ್ತಿ ಸ್ವೀಕರಿಸಿದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನಿರ್ದೇಶಕಿ ಡಾ. ಲಕ್ಷ್ಮೀದೇವಿ ಗೋಪಿನಾಥ್ ಮತ್ತು ಸದಸ್ಯೆ ಮಧುಮಿತ ಅವರಿಗೆ ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಲಾಯಿತು.


ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳ ಸಂಖ್ಯೆ ಹೆಚ್ಚಾಗಬೇಕು. ಸರ್ಕಾರದ ವತಿಯಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು. ಈ ದಿಸೆಯಲ್ಲಿ ಶಿವಮೊಗ್ಗ ಜಿಲ್ಲಾ ಮತ್ತು ವಾಣಿಜ್ಯ ಕೈಗಾರಿಕೆ ಸಂಘವು ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಲು ಬದ್ಧವಾಗಿದೆ ಎಂದು ತಿಳಿಸಿದರು.


ಲಕ್ಷ್ಮೀದೇವಿ ಗೋಪಿನಾಥ್ ಅವರಿಗೆ ಹಿಂದೆಯು ಸಹ ರಾಜ್ಯ ಮತ್ತು ಕೇಂದ್ರ ಸರ್ಕಾರದ ವತಿಯಿಂದ ಅನೇಕ ಮಹಿಳಾ ಉದ್ಯಮಿ ಪ್ರಶಸ್ತಿಯು ದೊರಕಿದೆ. ಮಧುಮಿತ ಅವರು ಹೋಟೆಲ್ ಉದ್ಯಮದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಈ ಸಾಧನೆ ಯುವ ಮಹಿಳಾ ಉದ್ಯಮಿಗಳಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು.

ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್, ನಿರ್ದೇಶಕರಾದ ಡಾ. ಲಕ್ಷ್ಮೀದೇವಿ ಗೋಪಿನಾಥ್, ಬಿ.ಸುರೇಶ್ ಕುಮಾರ್, ಪ್ರದೀಪ್ ವಿ ಯೆಲಿ, ವಸಂತ್ ಹೋಬಳಿದಾರ್, ಗಣೇಶ್ ಎಂ ಅಂಗಡಿ, ಜಿ.ವಿ.ಕಿರಣ್ ಕುಮಾರ್, ರವಿಪ್ರಕಾಶ್ ಜೆನ್ನಿ, ಪಿ.ರುದ್ರೇಶ್, ಕೆ.ಬಿ.ಶಿವಕುಮಾರ್, ಕೆ.ಎನ್.ರಾಜಶೇಖರ್, ಸಿ.ಎ.ಶರತ್, ಎಸ್.ಎಸ್.ಉದಯ್ ಕುಮಾರ್, ವಿನೋದ್ ಕುಮಾರ್, ಎಸ್.ಪಿ.ಶಂಕರ್, ಮಾಜಿ ಅಧ್ಯಕ್ಷ ಎನ್.ಗೋಪಿನಾಥ್ , ಅಶ್ವಥ್ ನಾರಾಯಣ್ ಶೆಟ್ಟಿ , ಜೆ.ಆರ್.ವಾಸುದೇವ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾಧ್ಯಕ್ಷ ಆರ್.ಮೋಹನ್ ಕುಮಾರ್ , ಪದವೀಧರ ಸಹಕಾರ ಸಂಘದ ಅಧ್ಯಕ್ಷ ಎಸ್.ಪಿ.ದಿನೇಶ್, ಬಳ್ಳೆಕೇರೆ ಸಂತೋಷ್ ಇತರರಿದ್ದರು.