
ಶಬರಿಮಲೆ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ಶಿವಮೊಗ್ಗ ನಗರ ಘಟಕದ ವತಿಯಿಂದ ಶುಭ ಮಂಗಳ ಸಮುದಾಯ ಭವನದ ಆವರಣದಲ್ಲಿ ಪಡಿಪೂಜೆ ಮತ್ತು ಶಕ್ತಿಪೂಜೆ ಅದ್ದೂರಿಯಾಗಿ ಜರಗಿತು. ನೂರಾರು ಅಯ್ಯಪ್ಪ ಸ್ವಾಮಿ ಭಕ್ತರು ಪಾಲ್ಗೊಂಡಿದ್ದರು.
ಸಂದರ್ಭದಲ್ಲಿ ಆದಿ ಚುಂಚನಗಿರಿ ಶಾಖಾ ಮಠದ ನಾದಮಯಾನಂದನಾಥ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಶಬರಿಮಲೆ ಸನ್ನಿದಾನಕ್ಕೆ ಎರಡು ಲಾರಿಗೂ ಹೆಚ್ಚು ಅಕ್ಕಿ ಮತ್ತು ಇತರ ವಸ್ತುಗಳನ್ನು ಕಳುಹಿಸುತ್ತಿದ್ದು ಅದಕ್ಕೆ ಪೂಜೆ ಸಲ್ಲಿಸಲಾಯಿತು.
ಬಂದ ಭಕ್ತಾದಿಗಳೆಲ್ಲರಿಗೂ ಪ್ರಸಾದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ದಂಪತಿಗಳು ಮತ್ತು ಕೆ.ಈ. ಕಾಂತೇಶ್. ಸಂತೋಷ್ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತಾದಿಗಳು ಭಾಗವಹಿಸಿದ್ದರು.