ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ, ರಾಜ್ಯ ಬಾಲಭವನ ಸೊಸೈಟಿ, ಬೆಂಗಳೂರು, ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿ.20 ರ ಬೆಳಿಗ್ಗೆ 10 ಗಂಟೆಗೆ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ತಮಿಳು ಪ್ರೌಢಶಾಲಾ ಆವರಣದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರು, ಸಾಗರ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷರು ಪಾಲ್ಗೊಳ್ಳುವರು.
ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನ ಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು.