ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ಡಿ.12 ರಂದು ಇನ್‌ಸ್ಪೆöÊರ್ ಎಂಬ ವಿನೂತನ ಕಾರ್ಯಕ್ರಮದಡಿ ಇಗ್ನೆöÊಟ್ ಮೈಂಡ್ & ಇಗ್ನೆöÊಟ್ ಪಾಸಿಟಿವಿಟಿ ಎಂಬ ಘೋಷವಾಕ್ಯದೊಂದಿಗೆ ಆನ್‌ಲೈನ್ ಪಾಡ್‌ಕಾಸ್ಟ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.


ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ 32 ಮುರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು 183 ವಿದ್ಯಾರ್ಥಿ ನಿಲಯಗಳ 5 ನೇ ತರಗತಿಯಿಂದ ಪದವಿ/ಇಂಜಿನಿಯರಿAಗ್/ಸ್ನಾತಕೋತ್ತರ ಓದುತ್ತಿರುವ ಸುಮಾರು 13 ರಿಂದ 15 ಸಾವಿರ ವಿದ್ಯಾರ್ಥಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಮಕ್ಕಳ ಮಾನಸಿಕ ಒತ್ತಡ ನಿರ್ವಹಣೆ ತಜ್ಞರು ಹಾಗೂ ಆಪ್ತಸಮಾಲೋಚಕರಾದ ಆರ್ ನಾಗೇಶ್ ಇವರು ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿರ್ವಹಣೆ, ಆತ್ಮಜ್ಞಾನ, ಕೌಶಲ್ಯಗಳು, ಕನಸುಗಳು, ಕ್ರಿಯಾಶೀಲತೆ, ಸೃಜನಶೀಲತೆ, ಕಲಿಕೆ, ವಿದ್ಯಾರ್ಥಿಗಳ ನಡವಳಿಕೆ, ಒಳ್ಳೆಯ ಹವ್ಯಾಸಗಳು ಮತ್ತು ಕೆಟ್ಟ ಹವ್ಯಾಸಗಳಿಂದಾಗುವ ಪರಿಣಾಮಗಳು, ಹಠಮಾರಿತನದಿಂದಾಗುವ ದುಷ್ಪರಿಣಾಮಗಳು, ಜೀವನದಲ್ಲಿ ಒಳ್ಳೆಯ ಆದರ್ಶಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು, ವಿದ್ಯಾರ್ಥಿಗಳ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಧ್ಯೇಯ ಹಾಗೂ ಗುರಿ ಹಾಗೂ ನೀವಂದುಕೊAಡAತೆ ನೀವಾಗಿ ‘ಬಿದ ದ ಪರ್ಸನ್ ಆಫ್ ಯುವರ್ ಚಾಯ್ಸ್-ಗೋಲ್ ಸೆಟ್ಟಿಂಗ್ ಕುರಿತು ವಿವರಣೆ ನೀಡಿದರು.


ಈ ಆನ್‌ಲೈನ್ ಪಾಡ್‌ಕಾಸ್ಟ್ ವಿಡಿಯೋ ಸಂವಾದದಲ್ಲಿ ಜಿ.ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶ್ರೀನಿವಾಸ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರೀತಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *