ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ತಮ್ಮ ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಶಾಲಾ ವಿಧ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಸೈಬರ್ ಕ್ರೈಂ, ಮಾದಕ ದ್ರವ್ಯಗಳ ದುಷ್ಪರಿಣಾಮಗಳು ಹಾಗೂ ಎನ್.ಡಿ.ಪಿ.ಎಸ್ ಕಾಯ್ದೆ, ಸಂಚಾರ ನಿಯಮಗಳು ಮತ್ತು ಐಎಂವಿ ಕಾಯ್ದೆ ಕುರಿತು ಮಾಹಿತಿ ನೀಡಿ ಅರಿವು ಮೂಡಿಸಿರುತ್ತಾರೆ.