ಶಾಲಾ ಶಿಕ್ಷಣ ಮತ್ತು ಸಾಕ್ಷರರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರು ತೀರ್ಥಹಳ್ಳಿಯಲ್ಲಿ ಎಳ್ಳಮವಾಸ್ಯೆ ಪ್ರಯುಕ್ತ ಜರುಗುತ್ತಿರುವ ಪ್ರಖ್ಯಾತ ಶ್ರೀರಾಮೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡು ದೇವರ ದರ್ಶನ ಪಡೆದು, ಶ್ರೀ ರಾಮೇಶ್ವರ ಎಲ್ಲರಿಗೂ ಒಳಿತು ಮಾಡಲಿ ಎಂದರು.


ಈ ವೇಳೆ ಎಂಎಡಿಬಿ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡ, ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ಜಾತ್ರಾ ಸಮಿತಿ ಸಂಚಾಲಕರಾದ ಸೊಪ್ಪುಗಡ್ಡೆ ರಾಘವೇಂದ್ರ ಮತ್ತಿತರೆ ಗಣ್ಯರು, ಭಕ್ತಾದಿಗಳು ಹಾಜರಿದ್ದರು.