ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದ NH-66ರಲ್ಲಿ ರೂ 85.00 ಕೋಟಿ ವೆಚ್ಚದ ಅರಾಟೆ ಸೇತುವೆ ದುರಸ್ಥಿ ಕಾಮಗಾರಿಗೆ ಸಂಸದ ಬಿ ವೈ ರಾಘವೇಂದ್ರ ಭೂಮಿ ಪೂಜೆ ಮಾಡಿದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಿಜೆಪಿ ಮಂಡಲ ಅಧ್ಯಕ್ಷರಾದ ಅನಿತಾ, ಸ್ಥಳೀಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.