ಮಂಜುನಾಥ್ ಶೆಟ್ಟಿ
ಪ್ರತಿದಿನ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದಕ್ಕೆ ಸಹಕಾರಿಯಾಗಲಿದೆ-ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್…
ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಶಿವಮೊಗ್ಗ ಜಿಲ್ಲಾ ಪೊಲೀಸ್ ನ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗಾಗಿ ಯೋಗ ಶಿಭಿರವನ್ನು ಹಮ್ಮಿಕೊಂಡಿದ್ದು ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಡಾ. ಭಾಗೀರತಿ ಕನ್ನಡತಿ ರವರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಯೋಗಾಭ್ಯಾಸವನ್ನು ತರಬೇತಿ ನೀಡಿದರು. ಈ ಕಾರ್ಯಕ್ರಮದ ಲೈವ್ ಸ್ಟ್ರೀಮಿಂಗ್ ಅನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಯೂಟ್ಯೂಬ್ ಚಾನೆಲ್ ನಲ್ಲಿಯೂ ಸಹಾ ಆಯೋಜಿಸಿದ್ದು, ಜಿಲ್ಲೆಯ ಇತರೆ ಪೊಲೀಸ್ ಉಪ ವಿಭಾಗಗಳ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳಿಗಾಗಿ ಆಯ್ದ ಸ್ಥಳಗಳಲ್ಲಿ ಪ್ರೊಜೆಕ್ಟರ್ ಸ್ಕ್ರೀನ್ ವ್ಯವಸ್ಥೆ ಮಾಡಿಸಿದ್ದು, ಎಲ್ಲಾ ಠಾಣೆಗಳವರು ಸಹಾ ಯೋಗಾಭ್ಯಾಸವನ್ನು ಮಾಡಿದರು.