ಮಂಜುನಾಥ್ ಶೆಟ್ಟಿ
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ-2026ರ ಅಂಗವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಮತ್ತು ಸಂಚಾರಿ ಸಿಪಿಐ ದೇವರಾಜ್ ಪೋಸ್ಟರ್ ಪ್ರದರ್ಶನ ಮಾಡಿದರು.
ನಗರದ ಸಂಚಾರಿ ವೃತ್ತದ ಕಚೇರಿಯಲ್ಲಿ ರಸ್ತೆ ಸುರಕ್ಷತಾ ಮಾಸದ ಪೋಸ್ಟರ್ ಗಳು ಮತ್ತು ಕರ ಪತ್ರಗಳನ್ನು ಪ್ರದರ್ಶನ ಮಾಡಿದರು. ಈ ಸಮಯದಲ್ಲಿ ಮಾತನಾಡಿದ ದೇವರಾಜ್ ರವರು ಪ್ರತಿಯೊಬ್ಬ ವ್ಯಕ್ತಿಯು ಕಡ್ಡಾಯವಾಗಿ ರಸ್ತೆ ಸುರಕ್ಷತಾ ಕ್ರಮವನ್ನು ಪಾಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಪಿಎಸ್ಐ ಸ್ವಪ್ನ ಅಕ್ಬರ್ ಮತ್ತು ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.