ಕರ್ನಾಟಕದ ಶಬರಿಮಲೆ ಬೆಜ್ಜವಳ್ಳಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಶ್ರೀ ವಿಶ್ವ ಸಂತೋಷ ಭಾರತಿ ಶ್ರೀಗಳಿಂದ ಹರಿಹರಾತ್ಮಜ ಪೀಠ ಪ್ರಶಸ್ತಿ ಪ್ರದಾನ…

ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಕರ್ನಾಟಕ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ “ಮಕರ ಸಂಕ್ರಾಂತಿ ಮಹೋತ್ಸವ ಹಾಗೂ ಶ್ರೀಗಳ ಪೀಠಾರೋಹಣದ 14ನೇ ವರ್ಧಂತ್ಯೋತ್ಸವ ಸಮಾರಂಭದಲ್ಲಿ ಖ್ಯಾತ ಚಲನಚಿತ್ರ ನಟರು, ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರಿಗೆ ಹರಿಹರಾತ್ಮಜ ಪೀಠ ಪ್ರಶಸ್ತಿಯನ್ನು ಡಾ.ವಿಶ್ವ ಸಂತೋಷ ಭಾರತಿ ಶ್ರೀಗಳು ಗಣ್ಯರ ಸಮ್ಮುಖದಲ್ಲಿ ನೀಡಿ ಗೌರವಿಸಿದರು.

ಮಕರ ಸಂಕ್ರಮಣ ಅಂಗವಾಗಿ ಕರ್ನಾಟಕದ ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರ ಎಂದು ಪ್ರಸಿದ್ಧಿ ಪಡೆದ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ನಡೆದ ಮಕರ ಸಂಕ್ರಾಂತಿ ಉತ್ಸವ ಹಾಗೂ ಪೀಠ ಸ್ಥಾಪನೆಯ 14ನೇ ವರ್ಷದ ವರ್ಧಂತ್ಯುತ್ಸವ ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಪತ್ನಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ದಂಪತಿ ಸಮೇತವಾಗಿ ಮಾಲೆ ಧರಿಸಿ, ಇರುಮುಡಿ ಕಟ್ಟಿ ದೇವಸ್ಥಾನಕ್ಕೆ ತೆರಳಿದರು.

ಈ ವೇಳೆ ಗರುಡ ದರ್ಶನ ಪಡೆದು, ಸಾವಿರಾರು ಭಕ್ತರ ಸಮ್ಮುಖದಲ್ಲಿ ಅಯ್ಯಪ್ಪ ಸ್ವಾಮಿ ಉತ್ಸವ ಮೂರ್ತಿಯನ್ನು ಹೊತ್ತ ಪಲ್ಲಕ್ಕಿ ಮೆರವಣಿಗೆಯಲ್ಲಿ ಭಾಗವಹಿಸಿ, ಅಯ್ಯಪ್ಪ ಸ್ವಾಮಿಯ ದಿವ್ಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಮಂಜುನಾಥ್ ಶೆಟ್ಟಿ…