ಮಂಜುನಾಥ್ ಶೆಟ್ಟಿ…
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ, ಜಿಲ್ಲಾ ಪಂಚಾಯತ್, ಶಿವಮೊಗ್ಗ ಮಹಾನಗರ ಪಾಲಿಕೆ ಶಿವಮೊಗ್ಗ ಹಾಗೂ ಜಿಲ್ಲಾ ವಕೀಲರ ಸಂಘ ಶಿವಮೊಗ್ಗ ರವರ ಸಹಯೋಗದಲ್ಲಿ ಶ್ರೀ ಸಂತೋಷ್.ಎಂ.ಎಸ್. ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ ರವರು ಬಾಲ್ಯ ವಿವಾಹ ಮುಕ್ತ ಭಾರತ ಅಭಿಯಾನದಡಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಆಧ್ಯಕ್ಷತೆಯನ್ನು ಶ್ರೀ ಮಾಯಣ್ಣ ಗೌಡ ಮಾನ್ಯ ಆಯುಕ್ತರು ಶಿವಮೊಗ್ಗ ಮಹಾನಗರ ಪಾಲಿಕೆ ಶಿವಮೊಗ್ಗ ರವರು ವಹಿಸಿದ್ದರು ಪ್ರಮುಖ ಅತಿಥಿಗಳಾಗಿ
ಶ್ರೀ G R ರಾಘವೇಂದ್ರ ಅಧ್ಯಕ್ಷರು ಜಿಲ್ಲಾ ವಕೀಲರ ಸಂಘ ಶ್ರೀಮತಿ ಅಕ್ಷಯ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿಗಳು ಶ್ರೀಮತಿ ಸುವರ್ಣ ವಿಶೇಷ ಚೇತನ ಅನುಷ್ಠಾನ ಅಧಿಕಾರಿಗಳು
ಶ್ರೀಮತಿ ಅನುಪಮಾ ಸಮುದಾಯ ವ್ಯವಹಾರಿಕ ಅಧಿಕಾರಿಗಳು ಹಾಗೂ ನಲ್ಮ್ ವಿಭಾಗದ ಸಿಬ್ಬಂದಿಗಳು ಮತ್ತು ಪಾಲಿಕೆ ವ್ಯಾಪ್ತಿಯ ಸ್ವ ಸಹಾಯ ಗುಂಪಿನ ಸದಸ್ಯರು ಗಳು ಹಾಜರಿದ್ದರು.