ಮಂಜುನಾಥ್ ಶೆಟ್ಟಿ…
ನವದೆಹಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಳೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇಂದು ನಡೆಯಬೇಕಾಗಿದ್ದ ಚುನಾವಣೆಗೆ ನಿತಿನ್ ನಬಿನ್ ಅವರೊಬ್ಬರೇ ನಾಮಪತ್ರ ಸಲ್ಲಿಸಿದ ಕಾರಣದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಹಾರದ ನಾಯಕ ನಿತಿನ್ ನಬಿನ್ ಅವರು ಜೆ.ಪಿ.ನಡ್ಡಾ ಅವರಿಂದ ಪಕ್ಷದ ಹುದ್ದೆ ವಹಿಸಿಕೊಳ್ಳಲಿದ್ದಾರೆ.
ಹರೆಯದ ನಿತಿನ್ 2025 ಡಿಸೆಂಬರ್ ನಲ್ಲಿ ಬಿಜೆಪಿ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರಕಾರದಲ್ಲಿ 2024 ರಿಂದ 2025 ರವರೆಗೆ ರಸ್ತೆ ನಿರ್ಮಾಣ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ಅವರು ಬಿಹಾರ ವಿಧಾನಸಭೆಯ ಬಂಕಿಪುರ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ.