ಮಂಜುನಾಥ್ ಶೆಟ್ಟಿ…

ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಅಸತ್ಯ ಹಾಗೂ ರಾಜಕೀಯ ಪ್ರೇರಿತ ಭಾಷಣವನ್ನು ಓದಲು ನಿರಾಕರಿಸುವ ಮೂಲಕ ರಾಜ್ಯಪಾಲರು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ತಿಳಿಸಿದ್ದಾರೆ.

ಸಂವಿಧಾನದ ಕಲಂ 159ರ ಅಡಿಯಲ್ಲಿ ಸತ್ಯನಿಷ್ಠೆಯ ಪ್ರಮಾಣವಚನ ಸ್ವೀಕರಿಸಿರುವ ರಾಜ್ಯಪಾಲರು, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಕರಡು ಭಾಷಣದಲ್ಲಿದ್ದ ಸುಳ್ಳು ಆರೋಪಗಳನ್ನು ತಿರಸ್ಕರಿಸಿರುವುದು ಶ್ಲಾಘನೀಯ. 137 ಸ್ಥಾನಗಳ ಬಲದಿಂದ ಅಹಂಕಾರದ ತುತ್ತತುದಿಯಲ್ಲಿರುವ ಕಾಂಗ್ರೆಸ್ ಸರ್ಕಾರ, ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸಂವಿಧಾನಾತ್ಮಕ ಸಂಸ್ಥೆಗಳನ್ನೇ ಗುರಿಯಾಗಿಸುತ್ತಿದೆ.

ಅದರಲ್ಲೂ ವಿಶೇಷವಾಗಿ ‘VB-G RAM G’ ಕಾಯ್ದೆಯ ಬಗ್ಗೆ ಜನರಲ್ಲಿ ಭ್ರಮೆ ಹುಟ್ಟಿಸುತ್ತಿರುವ ಕಾಂಗ್ರೆಸ್ ನಾಯಕರು, ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸುವ ಕೇಂದ್ರದ ಯೋಜನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವುದು ಖಂಡನೀಯ. ಕಳೆದ 2.5 ವರ್ಷಗಳಿಂದ ಭ್ರಷ್ಟಾಚಾರ ಮತ್ತು ಒಳಜಗಳದಲ್ಲೇ ಮುಳುಗಿರುವ ಸರ್ಕಾರ, ಕೂಡಲೇ ಸಂವಿಧಾನಾತ್ಮಕ ಹುದ್ದೆಗಳಿಗೆ ಗೌರವ ನೀಡುವುದನ್ನು ಕಲಿಯಲಿ ಎಂದು ಅರುಣ್ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *