ಮಂಜುನಾಥ್ ಶೆಟ್ಟಿ…
ದೇಶದ 77 ನೇ ಗಣರಾಜ್ಯೋತ್ಸವ ಅಂಗವಾಗಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯ ಮುಂಭಾಗದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್ ಕೆ ಜಗದೀಶ್ ಅವರ ಉಪಸ್ಥಿತಿಯಲ್ಲಿ ಧ್ವಜಾರೋಹಣ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು, ವಿಧಾನಪರಿಷತ್ ಶಾಸಕರಾದ ಡಿ ಎಸ್ ಅರುಣ್, ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ವಿಧಾನಪರಿಷತ್ ಶಾಸಕರಾದ ಡಾ. ಧನಂಜಯ್ ಸರ್ಜಿ, ರಾಜ್ಯ ಪ್ರಕೋಷ್ಟಗಳ ಸಂಯೋಕರಾದ ಎಸ್ ದತ್ತಾತ್ರಿ, ಮಾಜಿ ಶಾಸಕರಾದ ಆರ್ ಕೆ ಸಿದ್ದರಾಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಸಿ ಹೆಚ್, ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.