ಮಂಜುನಾಥ್ ಶೆಟ್ಟಿ…
ಶಿವಮೊಗ್ಗ : ನಗರದ ರಾಗಿಗುಡ್ಡದ ಡಾ.ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿನೀಯರ ವಸತಿ ಶಾಲೆಯಲ್ಲಿ 23 ವಿದ್ಯಾರ್ಥಿನೀಯರಿಗೆ ತೀವ್ರ ಕೆಮ್ಮು, ಶೀತ, ಜ್ವರದ ಲಕ್ಷಣಗಳು ಕಂಡು ಬಂದ ಹಿನ್ನಲೆಯಲ್ಲಿ ಎಲ್ಲರನ್ನೂ ಕೂಡ ನಿನ್ನೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ತೀವ್ರ ನಿಗಾವಹಿಸಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಈಗ ಸುಧಾರಿಸಿಕೊಳ್ಳುತ್ತಿದ್ದು, ಸ್ಥಳಕ್ಕೆ ಇಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಮೊದಲಿಯಾರ್ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿ ಅವರಿಗೆ ಹಣ್ಣು, ಸ್ಯಾನಿಟೈಸರ್ ಮತ್ತು ಮಾಸ್ಕ್ನ್ನು ವಿತರಿಸಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಭಾರತಿ ಕ್ರೆಡಿಟ್ ಕೋ-ಆಪರೇಟಿವ್ ಸೋಸೈಟಿ ನಿರ್ದೇಶಕಿ ಪವಿತ್ರಾ ವಿನೋದ್ ಉಪಸ್ಥಿತರಿದ್ದರು.