ಮಂಜುನಾಥ್ ಶೆಟ್ಟಿ…

ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಬುಧವಾರ ಸೊರಬ ತಾಲ್ಲೂಕಿನ ಉಳವಿಯ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾಗರ ದಿಂದ ಸೊರಬ ಹೋಗುವ ಮಾರ್ಗ ಮಧ್ಯೆ ಸಾಗುತ್ತಿರುವಾಗ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತವನ್ನು ಗಮನಿಸಿದ ಅವರು, ತಮ್ಮ ವಾಹನವನ್ನು ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.


ನಂತರ ಸೊರಬ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ತಹಶೀಲ್ದಾರ್ ಮತ್ತು ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರಗತಿ ಪರಿಶೀಲನೆ ಕೈಗೊಂಡು ಅಧಿಕಾರಿಗಳಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.
ತದನಂತರ ಅಧಿಕಾರಿಗಳೊಂದಿಗೆ ಸೊರಬದಲ್ಲಿರುವ ‘ಬಂಗಾರಧಾಮ ಉದ್ಯಾನ’ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಶಿರಸ್ತೇದಾರ್(ಆಡಳಿತ) ಚೇತನ್ , ಇತರೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *