ಮಂಜುನಾಥ್ ಶೆಟ್ಟಿ…

ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ
ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಅವಕಾಶ ನೀಡುವ ಮೂಲಕ ಕನ್ನಡ ಭಾಷೆಗೆ ಅವಮಾನ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣವೂ ಕೇಂದ್ರ ಸರ್ಕಾರದ ಧೋರಣೆಯನ್ನು ವಿರೋಧಿಸಿ ಬುಧವಾರ ನಗರದ ಅಶೋಕ ವೃತ್ತದಲ್ಲಿ ಭತಹತ್ ಪ್ರತಿಭಟನೆ ನಡೆಸಿತು.
ಶಿವಮೊಗ್ಗದ ಅಶೋಕ ವೃತ್ತದಲ್ಲಿ ಜಮಾಯಿಸಿದ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ಕನ್ನಡ ವಿರೋಧಿ ಧೋರಣೆ ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕನ್ನಡ ಭಾಷೆಯಲ್ಲಿಯು ರೈಲ್ವೆ ಇಲಾಖೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಕನ್ನಡದಲ್ಲಿ ನಡೆಸಬೇಕೆಂದು ಆಗ್ರಹಿಸಿತು.
ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಹೆಚ್.ಎಸ್ ಮಾತನಾಡಿ, ಕೇಂದ್ರದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕನ್ನಡಿಗರನ್ನು ಅಪಮಾನ ಮಾಡುವ ಪ್ರವೃತ್ತಿ ಬೆಳೆಸಿಕೊಂಡು ಹೋಗುತ್ತಿದೆ. ನಮ್ಮ ಮಾತೃಭಾಷೆಯಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆ ಬರೆಯುವ ಹಕ್ಕನ್ನು ಕೇಂದ್ರ ಸರ್ಕಾರವೇ ಕಿತ್ತುಕೊಳ್ಳುತ್ತಿದೆ ಎಂದರು.
ಇನ್ನು ರಾಜ್ಯದಿಂದ ಕೇಂದ್ರಕ್ಕೆ ಆಯ್ಕೆಯಾಗಿರುವ ಹೋಗಿರುವ ಕನ್ನಡಿಗರ ಸಂಸದರು ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ದ್ವನಿ ಎತ್ತುತ್ತಿಲ್ಲ. ಕಣ್ಣು ಮುಚ್ಚಿಕೊಂಡು ಕುಳಿತುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ಕುರಿತು ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಕೇಂದ್ರ ರೈಲ್ವೆ ರಾಜ್ಯ ಖಾತೆಯನ್ನು ನಿಭಾಯಿಸುತ್ತಿರುವುದು ಸಹ ರಾಜ್ಯದಿಂದ ಸಂಸದರಾಗಿ ಆಯ್ಕೆಯಾಗಿ ಹೋಗಿರುವ ಸೋಮಣ್ಣ ಅವರು. ಆದರೂ, ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಇಲ್ಲದೆ ಇರುವುದು ಮಾತ್ರ ವಿಪರ್ಯಾಸ. ಇನ್ನು ಕೇಂದ್ರ ಸಚಿವರಾಗಿರುವ
ಕುಮಾರಸ್ವಾಮಿ ಅವರು ಹಾಗೂ ಶಿವಮೊಗ್ಗ ಸಂಸದರಾಗಿರುವ ರಾಘವೇಂದ್ರ ಬಿ.ವೈ ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ಧ್ವನಿ ಎತ್ತಿ ಹಳ್ಳಿಗಾಡಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯಲ್ಲಿ ರೈಲ್ವೆ ಪರೀಕ್ಷೆ ಬರೆಯುವಂತೆ ಮಾಡಬೇಕು ಎಂದು ಆಗ್ರಹಿಸಿದರು.
ಕನ್ನಡ ಭಾಷೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಹಿಂದಿ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಅವಕಾಶಕೊಡುವ ಮೂಲಕ ಅನ್ಯಭಾಷೆಗಳಿಗೆ ಗುಲಾಮರಾಗುವಂತೆ ಕೇಂದ್ರ ಸರ್ಕಾರ ಮಾಡುತ್ತಿದೆ. ಪದೇ ಪದೇ ಹಿಂದಿ ಹೇರಿಕೆ ಮಾಡುವುದನ್ನು ನಿಲ್ಲಿಸಬೇಕು ಎಂದರು.
ಕನ್ನಡಕ್ಕೆ ಶತಮಾನದ ಇತಿಹಾಸವಿದೆ. ಹಿಂದಿಗೆ ಕನ್ನಡದಷ್ಟು ಐತಿಹಾಸಿಕವಲ್ಲ. ಹಾಗಾಗಿ ನಮ್ಮ ಭಾಷೆಯಲ್ಲಿ ನಮಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದರು.
ಕೇಂದ್ರ ಸರ್ಕಾರ ಕೂಡಲೇ ಈ ಬಗ್ಗೆ ಗಮನಹರಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಸಂಘಟನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಹೆಚ್.ಎಸ್ ಜಿಲ್ಲಾ ಉಪಾಧ್ಯಕ್ಷರಾದ ಸೈಯದ್ ಮುಜಿಬುಲ್ಲ ಮಹಿಳಾ ಘಟಕದ ಅಧ್ಯಕ್ಷರಾದ ಕವಿತ.ಸಿ ಉಪಾಧ್ಯಕ್ಷರಾದ ಪದ್ಮ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಹಮದ್ ಶಫಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಜಿಲ್ಲಾ ಸಹಸಂಘಟನಾ ಕಾರ್ಯದರ್ಶಿ ಅನ್ವರ್,ಮುಖಂಡರಾದ ಅನ್ವರ್,ಸತೀಶ್,ಯುವನಗರಾಧ್ಯಕ್ಷ ಪ್ರವೀಣ್ ಕುಮಾರ್,ಪ್ರದೀಪ್,ಕೃಷ್ಣಪ್ಪ,ಮಂಜುನಾಥ್,ಗಣೇಶ್, ಕರವೇ ಸ್ವಾಬಿಮಾನಿ ಬಣದ ಶಿಕಾರಿಪುರ ಗೌರವಾಧ್ಯಕ್ಷರಾದ ಶಿವಯ್ಯ ಶಾತ್ರಿ ಗ್ರಾಮಾಂತರ ಉಪಾಧ್ಯಕ್ಷ ಕೇಶವ ಜಿಲ್ಲಾ ಖಜಾಂಚಿ ಗಣೇಶ್ ಯುವ ಅಧ್ಯಕ್ಷ ಸಂತೋಷ್ ಸೇರಿದಂತೆ ಮುಂದಾತ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಬಾಗಿಯಾಗಿದ್ದರು.