ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ. 10 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಕ್ರೀಡಾಪಟುಗಳು ಸೇವಾಸಿಂದು https://sevasindhu.karnataka.gov.in ಮೂಲಕ ಫೆ. 10 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.