ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 15 ರ ಭಾನುವಾರದಂದು ಎ.ಎನ್.ಕೆ.ರಸ್ತೆ, ಜಿಲ್ಲಾ ಪಂಚಾಯತ್ ಹಿಂಭಾಗ, ಗಾಂಧೀನಗರ, ಶಾಂತಿನಗರದ ಯಲ್ಲಮ್ಮ ದೇವಸ್ಥಾನದ ಹತ್ತಿರ, ಪುರಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ, ಬೊಮ್ಮನಕಟ್ಟೆ ಅಪೂರ್ವ ಕಾಲೇಜಿನ ಹತ್ತಿರ ಹಾಗೂ ಕಾಶೀಪುರ ಮುಖ್ಯರಸ್ತೆ ಕೆನರಾ ಬ್ಯಾಂಕ್ ಹತ್ತಿರ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *