ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದ ಅಶೋಕ ನಗರದಲ್ಲಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ನೂತನ ವಸತಿ ಗೃಹಗಳ ಶಿಲಾನ್ಯಾಸ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ರವರು ಗುದ್ದಲಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಿಖಿಲ್ ರವರು ಇಂದು ವಸತಿ ಗೃಹಗಳ ಗುದ್ದಲಿ ಕಾರ್ಯಕ್ರಮ ಮಾಡಿದ್ದೇನೆ. ವಸತಿ ಗೃಹ ಪೂರ್ಣಗೊಂಡ ನಂತರ ಪೊಲೀಸರ ಕುಟುಂಬಸ್ಥರಿಗೆ ವಸತಿಗೃಹ ತುಂಬಾ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಅಡಿಷನಲ್ ಎಸ್ ಪಿ ರಮೇಶ್ ಕುಮಾರ್ ಕಾರಿಯಪ್ಪ ಮತ್ತು ಪಿಐ ಪಿಸಿಐ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.