ಮಂಜುನಾಥ್ ಶೆಟ್ಟಿ…
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಔಟ್ ಲಾಡ್ ಇಂಡಿಯಾ ಇವರುಗಳ ಸಹಯೋಗದೊಂದಿಗೆ ಫೆ. 16 ರಿಂದ 19 ರವರೆಗೆ ನಗರದ ಡಿ.ಎ.ಆರ್. ಸಭಾಂಗಣದಲ್ಲಿ ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲೂಕಿನ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಮಂಜುನಾಥ ಜಿ.ಎ.ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ.ದ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ಸಮಿತಿ ಅಧ್ಯಕ್ಷರಾದ ಅಭಯ ಧನಪಾಲ ಚೌಗಲಾ ಪಾಲ್ಗೊಳ್ಳಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್.ರವರಿಂದ ಪ್ರಾಸ್ತಾವಿಕ ನುಡಿ ಹಾಗೂ ಸಿದ್ದಾರ್ಥರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.