ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ -2ರ ವ್ಯಾಪ್ತಿಯಲ್ಲಿ ಫೆ. 17 ಮತ್ತು 18 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಚನ್ನಪ್ಪ ಲೇಔಟ್, ಎ.ಎನ್.ಕೆ.ರಸ್ತೆ, ಗಾಂಧಿನಗರ ಮುಖ್ಯರಸ್ತೆ, ಅಚ್ಯುತರಾವ್ ಲೇಔಟ್, ಜಿಲ್ಲಾ ಪಂಚಾಯತ್ ಮುಖ್ಯರಸ್ತೆ, ಕುವೆಂಪು ರಸ್ತೆ, ಸವಳಂಗ ರಸ್ತೆ, ವೆಂಕಟೇಶನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.