ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 22 ರ ಭಾನುವಾರದಂದು ಶರಾವತಿ ನಗರ ಎ ಬ್ಲಾಕ್ ಆದಿಚುಂಚನಗಿರಿ ಶಾಲೆ ಎದುರು ನರ್ಸ್ ಕ್ವಾಟರ್ಸ್ ಹತ್ತಿರ, ಗೋಪಾಳ 100 ಅಡಿ ರಸ್ತೆ ವಿನಾಯಕ ವೃತ್ತ ಗಣಪತಿ ದೇವಸ್ಥಾನದ ಮುಂಭಾಗ, ಬಿ.ಹೆಚ್.ರಸ್ತೆ ಸಹ್ಯಾದ್ರಿ ಕಾಲೇಜ್ ಮೊದಲನೆ ಗೇಟ್ ಹತ್ತಿರ, ಬೊಮ್ಮನಕಟ್ಟೆ ಅಪೂರ್ವ ಕಾಲೇಜಿನ ಹತ್ತಿರ ಹಾಗೂ ವಿನೋಬನಗರ ಪೊಲೀಸ್ ಚೌಕಿ ಪೊಲೀಸ್ ಠಾಣೆ ಎದುರು ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *