ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಫೆ.24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲೆಯ ಸಾಗರ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.
ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ದುರಾಡಳಿತ, ಸರ್ಕಾರಿ ಹಣ/ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.