ಮಂಜುನಾಥ್ ಶೆಟ್ಟಿ…
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಶಿವಮೊಗ್ಗ ವತಿಯಿಂದ ‘ಸಂಸ್ಥಾಪಕರ ದಿನಾಚರಣೆ’ ಕಾರ್ಯಕ್ರಮ ನಡೆಯಿತು.ಪ್ರತಿ ವರ್ಷದಂತೆ ಈ ವರ್ಷವು ಸಹ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ 2025 ನೇ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಶಿವಮೊಗ್ಗದ ಉತ್ತಮ ಉದ್ಯಮಿಗಳಿಗೆ ಪ್ರಶಸ್ತಿಗಳು ನೀಡಿದರು.ಪ್ರತಿಷ್ಠಿತ ಲಕ್ಷ್ಮಿ ಮೆಡಿಕಲ್ಸ್ ಗೆ ವಾಣಿಜ್ಯೋದ್ಯಮಿ 2025 ಪ್ರಶಸ್ತಿ ನೀಡಿದರು. ಕಾರ್ಯಕ್ರಮದಲ್ಲಿ ಮಧುಕರ್ ಶೆಟ್ಟಿ ದಂಪತಿಗಳಿಗೆ ಸನ್ಮಾನಿಸಿದರು.
ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರು ಶ್ರೀ ಮಧುಕರ್ ಶೆಟ್ಟಿ ಇವರಿಗೆ ನೀಡಿರುವುದು ಅತ್ಯಂತ ಹರ್ಷದ ಸಂಗತಿಯಾಗಿದೆ.
ಸಮಾಜದ ಪರವಾಗಿ ಶ್ರೀ ಮಧುಕರ್ ಶೆಟ್ಟಿ ದಂಪತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು.