ಮಂಜುನಾಥ್ ಶೆಟ್ಟಿ…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಿರಣ್ ಕುಮಾರ್ ರವರು ಕರ್ನಾಟಕದ ಲಕ್ಷಾಂತರ ಜನರು ತಮ್ಮ ಕುಟುಂಬ ನಿರ್ವಹಣೆಗಾಗಿ ಉದ್ಯೋಗವನ್ನು ಅರಸಿ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿದ್ದಾರೆ. ಆದರೆ ಅಮೇರಿಕ, ಇಸ್ರೇಲ್, ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ಸೌದಿಅರೇಬಿಯಾ, ಯು ಎ ಇ, ಕತಾರ್, ,ಕುವೈತ್ ಬೆಹರೈನ್,ಇರಾಕ್, ಜೋರ್ಡನ್, ಮೊದಲಾದ ಮಧ್ಯಪ್ರಚ್ಯಾ ದೇಶಗಳು ಭೀಕರ ಪರಿಣಾಮ ಎದುರಿಸುತ್ತಿವೆ. ಆದರೆ ಉದ್ಯೋಗ ಅರಸಿ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಲಕ್ಷಾಂತರ ಕನ್ನಡಿಗರು ಜೀವದ ಸುರಕ್ಷತೆ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ.ಹಾಗೂ ಕರ್ನಾಟಕದಲ್ಲಿರುವ ಇವರ ಕುಟುಂಬಗಳು ತಮ್ಮವರ ಭದ್ರತೆಬಗ್ಗೆ ಆತಂಕದ ಪರಿಸ್ಥಿತಿಯಲ್ಲಿದ್ದಾರೆ.

ಹಾಗಾಗಿ ತಾವುಗಳು ತಕ್ಷಣವೇ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರಿಗೆ ಸುರಕ್ಷತೆಯನ್ನು ನೀಡಿ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಬೇಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣವು ಒತ್ತಾಯ ಪೂರ್ವಕವಾಗಿ ಅಗ್ರಹಿಸುತ್ತದೆ. ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ ಎಸ್ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಸಿ ಜಿಲ್ಲಾ ಉಪಾಧ್ಯಕ್ಷರಾದ ಮುಜಿಬುಲ್ಲ ಹಾಗೂ ವಿಜಯ್ ಕುಮಾರ್ ಜಿಲ್ಲಾ ಮಹಾಪ್ರದಾನ ಕಾರ್ಯದರ್ಶಿ ಮಹಮ್ಮದ್ ಶಫಿ ಮಹಿಳಾ ಪ್ರಧಾನ ಕಾರ್ಯದರ್ಶಿ ಆರತಿ ತಿವಾರಿ ಯುವ ನಗರ ಅಧ್ಯಕ್ಷ ಪ್ರವೀಣ್ ಕುಮಾರ್ ಸತೀಶ್ ಹನುಮಂತ ಮಂಜುನಾಥ್ ಪಾಪು ಅನುಪಮಾ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜ್ಯೋತಿ ಮುಂತಾದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *