ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು ಆಯೋಜಿಸಲಾಗಿದೆ.
ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟಿçà ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ ಪೇಸ್ಟಿçÃ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಲಾಗಿದೆ.
ಆಸಕ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಮಾ.11 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ತರಬೇತಿ ಸಮಯದಲ್ಲಿ ಊಟ ಮತ್ತು ವಸತಿ ಸೌಲಭ್ಯ ಇರುವುದಿಲ್ಲ. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. ಮೊ.ಸಂ. 9449187763 ಮತ್ತು ಜಯಶಂಕರ 9686555897 ಇವರುಗಳನ್ನು ಸಂಪರ್ಕಿಸಬಹುದೆAದು ಪ್ರಕಟಣೆ ತಿಳಿಸಿದೆ.