ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಗೋಪಿ ವೃತ್ತದಲ್ಲಿ ವಿಭಿನ್ನ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪದೇ ಪದೇ ಉಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ಮಾಡುತ್ತಿದ್ದು, ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಬಿಜೆಪಿ ಕೇಂದ್ರದಲ್ಲಿ ಬಂದ ದಿನದಿಂದಲೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಜನಸಾಮಾನ್ಯರ ಮೇಲೆ ತೆರಿಗೆಯ ಅಧಿಕ ಹೊರೆ ಹೊರಿಸುತ್ತಿದೆ. ಇದರಿಂದಾಗಿ ಜನಸಾಮಾನ್ಯರ ಜೀವನ ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ.

ಅಡುಗೆ ಅನಿಲದ ಬೆಲೆಯನ್ನು ರೂ. 60 ಹಾಗೂ ವಾಣಿಜ್ಯ ಸಿಲೆನಂಡರ್ ಬೆಲೆಯನ್ನು 115 ರೂ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕಳೆದ ಮೂರು ತಿಂಗಳಲ್ಲಿ 307 ರೂಪಾಯಿ ಗಳನ್ನು ಗ್ಯಾಸ್ ಮೇಲೆ ಹೆಚ್ಚಳ ಮಾಡಿದ್ದು ಇಂತಹ ಜನವಿರೋಧಿ ನಿರ್ಧಾರವನ್ನು ಜಿಲ್ಲಾ ಯುವ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ. ಈ ಬೆಲೆ ಏರಿಕೆಗಳು ಈಗಾಗಲೇ ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಸಾಮಾನ್ಯ ಜನರು, ರೈತರು, ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಬಾರಿ ಹೊರೆಯಾಗಿದೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ಉದ್ಯೋಗ ಸೃಷ್ಟಿ ಮಾಡುವುದನ್ನಾಗಲೀ, ಜನಸಾಮಾನ್ಯರ ಜೀವನ ಸರಳಗೊಳಿಸುವ ಕೆಲಸವನ್ನಾಗಲೀ ಮಾಡುತ್ತಿಲ್ಲ. ಬದಲಿಗೆ ಜನರಿಂದ ಮಿತಿಮೀರಿ ತೆರಿಗೆ ವಸೂಲು ಮಾಡುವ ಮೂಲಕ ಜನರನ್ನು ಸುಲಿಗೆ ಮಾಡಲು ಹೊರಟಿದೆ.

ಗೌರವಾನ್ವಿತ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕೇಂದ್ರ ಸರ್ಕಾರದ ಬೆಲೆ ಏರಿಕೆಯ ನಿರ್ಧಾರವನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕು. ಇಲ್ಲವೇ ಜನವಿರೋಧಿ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಈ ಮೂಲಕ ಆಗ್ರಹಿಸಲಾಯಿತು.


ಈ ಸಂದರ್ಭದಲ್ಲಿ 2023ರ ಕಾಂಗ್ರೆಸ್ ಅಭ್ಯರ್ಥಿಯಾದ ಯೋಗೇಶ್ ಉತ್ತರ ಬ್ಲಾಕ್ ಅಧ್ಯಕ್ಷರಾದ ಶಿವಕುಮಾರ್ ಜವಳಿ ನಿಗಮದ ಅಧ್ಯಕ್ಷರಾದ ಚೇತನ್ ಗೌಡ ಕಾಂಗ್ರೆಸ್ ಯುವ ಮುಖಂಡರಾದ ಸಿಜಿ ಮಧುಸೂದನ್ ಕಾಂಗ್ರೆಸ್ ಮುಖಂಡರಾದ ಚಿನ್ನಪ್ಪ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಹರ್ಷಿತ್ ಗೌಡ ನಗರಾಧ್ಯಕ್ಷರಾದ ಚರಣ್ ಶೆಟ್ಟಿ ಗ್ರಾಮಾಂತರ ಅಧ್ಯಕ್ಷರಾದ ಪ್ರವೀಣ್ ಬ್ಲಾಕ್ ಅಧ್ಯಕ್ಷರಾದ ಪ್ರವೀಣ್ ಶಿಮೊಗ್ಗ ನಗರ ಉತ್ತರ ಬ್ಲಾಕ್ ಅಧ್ಯಕ್ಷರಾದ ಗಿರೀಶ್ ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ಮೊಮ್ಮದ್ ಗೌಸ್ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ವಿಜಯಕುಮಾರ್ ಯುವ ಕಾಂಗ್ರೆಸ್ ಜನರಲ್ ಸೆಕ್ರೆಟರಿ ಅಬ್ದುಲ್ ಸತ್ತರ್, ನಿಖಿಲ್ , ವಿಷ್ಣುಕುಮಾರ್, ಯೋಗೀಶ್, ಆದರ್ಶ್, ರವಿ, ಲಿಂಗರಾಜು, ಪವನ್, ಪ್ರೀತಮ್, ದೃಶ್ಯ ಚೇತನ್, ರಾಮ್ ಕುಮಾರ್, ಪ್ರಕಾಶ್, ಚಂದನ್, ನೂತನ್, ಕಾರ್ತಿಕ್, ನಿರಂಜನ್, ಸಂದೀಪ್, ಅಶೋಕ್ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *