ಮಂಜುನಾಥ್ ಶೆಟ್ಟಿ…

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ ತಿಂಗಳ 4 ನೇ ತಾರೀಖಿನಿಂದ ಪ್ರಾರಂಭಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಈ ಶಿಬಿರದಲ್ಲಿ ಪಾನಿ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ ಚಾಟ್ಸ್ ಗಳ ತಯಾರಿಕೆಯ ಬಗ್ಗೆ ತರಬೇತಿ ನೀಡಲಾಗುವುದು. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.