ಮಂಜುನಾಥ್ ಶೆಟ್ಟಿ…


ಶಿವಮೊಗ್ಗ ಜಿಲ್ಲಾ ಎನ್ ಎಸ್‌ಬ ಯು ಐ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ವಿದ್ಯಾರ್ಥಿನಿಯರಿಗೆ ಆಂತರಿಕ ಪರೀಕ್ಷೆಯಲ್ಲಿ ಅಂಕ ಕೊಡಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕೆಂದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಸಹ್ಯಾದ್ರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುದುಕಪ್ಪ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವರನ್ನು ಕೆಲಸದಿಂದ ವಜಾಗೊಳಿಸಬೇಕೆಂದು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಅಗ್ರಹಿಸಿದರು.

ತನ್ನ ಲೈಂಗಿಕ ಬಯಕೆಗಳನ್ನು ತೀರಿಸಿಕೊಳ್ಳಲು ಉಪನ್ಯಾಸಕನಾಗಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಬೇಕಾಗಿದ್ದ ಪ್ರೊ. ಮುದುಕಪ್ಪ, ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ ಗಳನ್ನು ಕಳುಹಿಸುತ್ತಿದ್ದು ಈ ಬಗ್ಗೆ ನೊಂದ ವಿದ್ಯಾರ್ಥಿನಿಯರು ಕಾಲೇಜು ಪ್ರಾಂಶುಪಾಲರಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳದೆ ನೆಪ ಮಾತ್ರಕ್ಕೆ ತಿಳುವಳಿಕೆ ಪತ್ರವನ್ನು ನೀಡಿ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿರುವುದನ್ನು ಎನ್.ಎಸ್.ಯು.ಐ. ಸಹಿಸುವುದಿಲ್ಲ.

ಅನೇಕ ಮಹನೀಯರುಗಳು ಕಲಿತು, ಕಲಿಸಿದ ಸಹ್ಯಾದ್ರಿ ಕಾಲೇಜಿನಲ್ಲಿ ಇತ್ತೀಚಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ.ನೊಂದ ವಿದ್ಯಾರ್ಥಿನಿಯರು ದೂರು ಕೊಟ್ಟರೂ ಪ್ರಾಂಶುಪಾಲರು ಕ್ರಮ ಕೈಗೊಂಡಿಲ್ಲ. ನಂತರ ಎನ್.ಎಸ್.ಯು.ಐ. ಕುಲಸಚಿವರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ನೀಡಲಾಗಿತ್ತು. ಆಗ ಕುಲಸಚಿವರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು..

ಆದರೆ, ಇದುವರೆಗೂ ಉಪನ್ಯಾಸಕ ಪ್ರೊ. ಮುದುಕಪ್ಪ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ನಡೆಯುತ್ತಿದೆ. ಕೂಡಲೇ ಕುಲಪತಿಗಳು ಈ ಕಾಮುಕ ಉಪನ್ಯಾಸಕ ಪ್ರೊ. ಮುದುಕಪ್ಪನನ್ನು ಕೆಲಸದಿಂದ ವಜಾಗೊಳಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಎನ್.ಎಸ್.ಯು.ಐ. ವಿವಿ ಬಂದ್ ನಂತಹ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಯಿತು.

ಈ ಸಂದರ್ಭದಲ್ಲಿ NSUI ನ ಜಿಲ್ಲಾಧ್ಯಕ್ಷರಾದ ವಿಜಯಕುಮಾರ್, ರಾಜ್ಯ ಕಾರ್ಯದರ್ಶಿ ಬಾಲಾಜಿ ಹೆಚ್ಎಸ್, ನಗರಾಧ್ಯಕ್ಷರಾದ ರವಿಕುಮಾರ್, ಚಂದ್ರೋಜಿ ರಾವ್, ಆದಿತ್ಯ, ಸುಭಾನ್, ಅಭಿಷೇಕ್ ಅನುಪಿನ ಕಟ್ಟೆ, ಪ್ರಜ್ವಲ್, ಶ್ರೀಕಾಂತ್, ಕಿಸನ್, ಯೂಸಫ್, ಸಾದುಲ್ಲ, ಅಭಿಷೇಕ್, ಪ್ರಭು, ಶ್ರೇಯಸ್, ಕುಮಾರ್ ಇನ್ನೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *