ಮಂಜುನಾಥ್ ಶೆಟ್ಟಿ…

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರರನ್ನಾಗಿ ಮಾಡಿ, ಜಿ.ಡಿ. ಮಂಜುನಾಥ್ ಅವರನ್ನು ನೇಮಕ ಮಾಡಿ ರಾಜ್ಯ ವಕ್ತಾರರಾದ ರಮೇಶ್‌ಬಾಬು ಅವರು ತತ್‌ಕ್ಷಣದಿಂದಲೇ ಜರಿಗೆ ಬರುವಂತೆ ಆದೇಶ ಹೊರಡಿಸಿದ್ದು ಪಕ್ಷದ ಸಿದ್ಧಾಂತಗಳಿಗೆ ಅನುಗುಣವಾಗಿ ಪಕ್ಷದ ಜಿಲ್ಲಾ ವಕ್ತಾರರಾಗಿ ಜವಾಬ್ದಾರಿ ನಿರ್ವಹಿಸಲು ಮತ್ತು ಸಂಘಟನೆಯಲ್ಲಿ ತೊಡಗಿಸಲು ಆದೇಶಿಸಿದ್ದಾರೆ.

ಪಕ್ಷದ ಈ ಆದೇಶಕ್ಕೆ ಕಾರಣೀಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ರಾಜ್ಯ ವಕ್ತಾರ ರಮೇಶ್‌ಬಾಬು ಅವರಿಗೆ ಜಿ.ಡಿ. ಮಂಜುನಾಥ್ ಕೃತಜ್ಞತೆ ಹಾಗೂ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *