ಮಂಜುನಾಥ್ ಶೆಟ್ಟಿ…

ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಅಧೀನದಲ್ಲಿರುವ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.


ಹುದ್ದೆಗಳ ವಿವರ…

ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಒಟ್ಟು 09 ಹುದ್ದೆಗಳು ಇದ್ದು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ) ಆಯ್ಕೆ ಮಾಡಲಾಗುವುದು.
ಎಂ.ಬಿ.ಬಿ.ಎಸ್ (MBBS) ಪದವೀಧರರಾಗಿರಬೇಕು. ಜಿಲ್ಲೆಯ ಬ್ಯಾಕೋಡು, ತುಮರಿ, ಕಾರ್ಗಲ್, ತಾಳಗುಪ್ಪ, ತಡಗಳಲೆ, ಮೂಡಿದೋಡಿಕೊಪ್ಪ, ಚಂದ್ರಗುತ್ತಿ, ಬೆಟ್ಟಬಸವಾನಿ ಹಾಗೂ ರಿಪ್ಪನಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸಲಾಗುವುದು.
ಸಂದರ್ಶನದ ವಿವರ: ದಿನಾಂಕ: 01/04/2026 ರಂದು ಸಮಯ: ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಬಿ.ಹೆಚ್ ರಸ್ತೆ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನ ನಡೆಯಲಿದೆ.

ಒಂದು ಪಕ್ಷ ಹುದ್ದೆಗಳು ಪೂರ್ಣ ಭರ್ತಿಯಾಗದಿದ್ದಲ್ಲಿ ಪ್ರತಿ ದಿನ ಇದೇ ವೇಳೆ ಮತ್ತು ಸ್ಥಳದಲ್ಲಿ ಹುದ್ದೆಗಳು ಭರ್ತಿ ಆಗುವವರೆಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ವೇಳೆ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಮತ್ತು ದಾಖಲೆಗಳ ಒಂದು ಸೆಟ್ ನಕಲು ಪ್ರತಿಗಳು ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು.
ಹೆಚ್ಚಿನ ಮಾಹಿತಿಗಾಗಿ ನೇರವಾಗಿ ಕಚೇರಿಗೆ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 08182-222382 ಅನ್ನು ಸಂಪರ್ಕಿಸಬಹುದು ಎಂದು ಡಿಹೆಚ್ ಓ ಡಾ. ನಟರಾಜ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *