ಮಂಜುನಾಥ್ ಶೆಟ್ಟಿ…

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಕೌಂಟರ್‌ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ.


ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್‌ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್‌ಲೈನ್‌ನಲ್ಲಿ ಹಾಗೂ ಪೇಟಿಎಂ/ನೆಟ್‌ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಶಿವಮೊಗ್ಗ ಒನ್ ವ್ಯವಸ್ಥೆಯಡಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿರುತ್ತದೆ. ವಿಶೇಷವಾಗಿ 2026-27 ರ ಖಾತೆದಾರರಿಗೆ ಇಡಿಸಿ (ಪಿಓಎಸ್) ಯಂತ್ರಗಳ ಮೂಲಕ ಸ್ವತಿನ ಆಸ್ತಿ ತೆರಿಗೆಯನ್ನು ಪಾವತಿಸಿದ ರಸೀದಿಯನ್ನು ನೀಡಲಾಗುತ್ತದೆ.

ಏ.30 ರವರೆಗೆ ಆರ್ಥಿಕ ವರ್ಷ 2026-27 ನೇ ಸಾಲಿಗೆ ಅನ್ವಯಿಸುವ ಆಸ್ತಿ ತೆರಿಗೆ ಮೇಲಿನ ಶೇ. 5% ರ ತೆರಿಗೆ ರಿಯಾಯಿತಿಯ ಸೌಲಭ್ಯದ ಕಾಲಾವಧಿ ಇರುತ್ತದೆ. ಜೂನ್ 30ರವೆಗೆ ದಂಡರಹಿತವಾಗಿ ಆಸ್ತಿ ತೆರಿಗೆ ಪಾವತಿಸಬಹುದಾಗಿರುತ್ತದೆ.


ಜು. 01 ರ ನಂತರ ಪಾವತಿಸಿದಲ್ಲಿ ಮಾಸಿಕ ಶೇ. 2% ರಷ್ಟು ದಂಡದೊAದಿಗೆ ಪಾವತಿಸಬೇಕಾಗುತ್ತದೆ. ಆದ್ದರಿಂದ ಸಾರ್ವಜನಿಕರು ಏಪ್ರಿಲ್ 2026ರ ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸಿ ಶೇ. 5%ರ ರಿಯಾಯಿತಿ ಪಡೆಯುವಂತೆ ಹಾಗೂ ಆಸ್ತಿ ತೆರಿಗೆ ಪಾವತಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಎಂದು ಶಿವಮೊಗ್ಗ ಮಹಾನಗರಪಾಲಿಕೆ ಉಪ ಆಯುಕ್ತರು ಪತ್ರಿಕೆ ಪ್ರಕಟಣೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *