ಮಂಜುನಾಥ್ ಶೆಟ್ಟಿ…

ನಾಡೋಜ ಡಾ. ಜಿ. ಶಂಕರ್ ರವರಿಗೆ ಪ್ರತಿಷ್ಠಿತ “ದೀನಬಂಧು ಪ್ರಶಸ್ತಿ”:
ಮಾರ್ಚ್ 31 ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬದ ಸಂಭ್ರಮ…

ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಶಿವಮೊಗ್ಗ ಜಿಲೆಯ ಶಂಕರಘಟ್ಟದ ನಮ್ಮ ದೀನಬಂಧು ಸೇವಾ ಟ್ರಸ್ಟ್ ಸಾರ್ಥಕವಾದ 25 ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ತನ್ನ ಬೆಳ್ಳಿ ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಆ ವಿಚಾರವನ್ನು ತಮ್ಮೊಡನೆ ಹಂಚಿಕೊಳ್ಳುತ್ತಿದ್ದೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಶೆಟ್ಟಿ ಶಂಕರ್ ಘಟ್ಟ ತಿಳಿಸಿದರು.

ಸಮಾಜದ ಋಣವನ್ನು ತೀರಿಸಲು ಅದರಲ್ಲೂ ವಿಶೇಷವಾಗಿ ದೀನ ದಲಿತರ ಮತ್ತು ಸಮಾಜದ ಶೋಷಿತ ವರ್ಗದವರ ಸೇವೆಗಾಗಿ ಕಟಿಬದ್ಧರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಂಕರಘಟ್ಟದಿಂದ ಪಾದಯಾತ್ರೆ ಮೂಲಕ ತೆರಳಿ, ಧರ್ಮಾಧಿಕಾರಿಗಳಾದ ಶ್ರೀ ಡಾ: ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ, ದಿನಾಂಕ 2.10.1999 ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ದೀನಬಂಧು ಸೇವಾ ಟ್ರಸ್ಟ್‍ನ್ನು ಸ್ಥಾಪಿಸಲಾಯಿತು.


ದೀನಬಂಧು, ದೀನರ, ವೃದ್ಧರ ಹಾಗೂ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಹಾಗೂ ಅವರ ಸಂಕಷ್ಟಗಳಿಗೆ ನೆರವಾಗುತ್ತಾ, ಪ್ರೋತ್ಸಾಹಿಸುತ್ತಾ, ಅನೇಕ ಸಮಾಜ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ನನ್ನ ಅಧ್ಯಕ್ಷತೆಯಲ್ಲಿ ಸ್ನೇಹಿತರೊಡಗೂಡಿ ರಚನಾತ್ಮಕ ಕಾರ್ಯಗಳನ್ನು ನಡೆಸುವ ಉದ್ದೇಶದ ಹಿನ್ನೆಲೆಯಲ್ಲಿ ಈ ದೀನಬಂಧು ಸೇವಾ ಟ್ರಸ್ಟ್(ರಿ)ನ್ನು ಸ್ಥಾಪಿಸಲಾಗಿತ್ತು. ಈಗ ನಮ್ಮ ಟ್ರಸ್ಟ್ ಗೆ 25 ವರ್ಷಗಳು ತುಂಬಿದೆ ಎಂದು ತಿಳಿಸಲು ಹರ್ಷಿಸುತ್ತೇವೆ.


ಬೆಳ್ಳಿಹಬ್ಬದ ಅಂಗವಾಗಿ ಇದೇ ಮಾರ್ಚ್ 31 ರ ಮಂಗಳವಾರದಂದು ಸಂಜೆ 4.00 ಘಂಟೆಗೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಆನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಉಡುಪಿಯ ಡಾ.ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ.ಜಿ. ಶಂಕರ್ ಇವರಿಗೆ ದೀನಬಂಧು ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯು ರೂ.1 ಲಕ್ಷ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿರುತ್ತದೆ.

ರಾಜ್ಯದಲ್ಲಿ ಸಮಾಜಸೇವೆಯಲ್ಲಿ ತೊಡಗಿರುವ ಸಮಾಜಸೇವಕರೊಬ್ಬರನ್ನು ಆಯ್ಕೆ ಮಾಡುವ ಸಲುವಾಗಿ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಂ.ವೆಂಕಟೇಶ್ವರಲು ಇವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿ, ಆ ಸಮಿತಿಯ ಸದಸ್ಯರನ್ನಾಗಿ ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಬಿ.ರಮೇಶ್, ಕುವೆಂಪು ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಜಿ.ಪ್ರಶಾಂತ ನಾಯಕ್ ಹಾಗೂ ಹಂಪಿ ವಿಶ್ವವಿದ್ಯಾಲಯದ ಪ್ರಾಧ್ಯಪಕರಾದ ಪ್ರೊ.ಪ್ರಭಾಕರ್ ಇವರನ್ನು ನೇಮಿಸಲಾಗಿತ್ತು. ಆ ಸಮಿತಿಯ ಶಿಫಾರಸ್ಸಿನ ಮೇರೆಗೆ ಡಾ.ಜಿ. ಶಂಕರ್ ಇವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.


ಇದೇ ಸಂದರ್ಭದಲ್ಲಿ ಮಾಜಿ ಸಭಾಪತಿಗಳಾದ ಡಿ.ಎಚ್.ಶಂಕರಮೂರ್ತಿಯವರನ್ನು, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾದ ಡಾ.ಬೋಜ್ಯಾನಾಯಕ್ ಹಾಗೂ ಶಿಕ್ಷಣತಜ್ಞರಾದ ಪ್ರೊ.ಜೆ.ಎಲ್. ಪದ್ಮನಾಭ್ ಇವರನ್ನು ಕೂಡ ಸನ್ಮಾನಿಸಲಾಗುವುದು.


ಈ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲನಂದನಾಥ ಮಹಾಸ್ವಾಮೀಜಿಯವರು, ಸಾಣೇಹಳ್ಳಿಯ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಆದಿಚುಂಚನಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ
-2-
ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಬಾರ್ಕೂರು ಮಹಾಸಂಸ್ಥಾನದ ಡಾ.ವಿಶ್ವಸಂತೋಷಭಾರತಿ ಶ್ರೀ ಪಾದಂಗಳು ಹಾಗೂ ಕೊಪ್ಪದ ಗೌರಿಗದ್ದೆಯ ಸ್ವರ್ಣಪೀಠಿಕಾಪುರ ದತ್ತಾಶ್ರಮದ ಅವಧೂತರಾದ ಶ್ರೀ ಶ್ರೀ ವಿನಯ್ ಗುರೂಜಿಯವರು ವಹಿಸಲ್ಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಮಧುಬಂಗಾರಪ್ಪ ನೆರವೇರಿಸಲ್ಲಿದ್ದಾರೆ. ಕಾರ್ಯಕ್ರಮದಲ್ಲಿ ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ಬಿ.ಕೆ.ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಎಸ್. ಎನ್. ಚನ್ನಬಸಪ್ಪ, ವಿಧಾನಪರಿಷತ್ ಶಾಸಕರುಗಳಾದ ಡಾ.ಮಂಜುನಾಥ ಭಂಡಾರಿ, ಬಲ್ಕೀಶ್‍ಬಾನು, ಡಾ.ಧನಂಜಯ ಸರ್ಜಿ, ಡಿ.ಎಸ್. ಅರುಣ್, ಆಯನೂರು ಮಂಜುನಾಥ್, ಸುಧಾಕರ ಎಸ್ ಶೆಟ್ಟಿ, ಸಿ.ಎಸ್. ಚಂದ್ರಭೂಪಾಲ್, ಎಸ್. ರುದ್ರೇಗೌಡರು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿಯವರು, ಎಂ.ಶ್ರೀಕಾಂತ್, ಆರ್. ಪ್ರಸನ್ನಕುಮಾರ್, ಹೆಚ್.ಎನ್. ವಿದ್ಯಾದರ್, ಕೆ.ಮರಿಯಪ್ಪ, ಎಸ್. ಓಂಕಾರಪ್ಪ, ಎನ್. ರಮೇಶ್ ಹಾಗೂ ಎಸ್ ಪಿ ದಿನೇಶ್ ಡಾ ಸತೀಶ್ ಕುಮಾರ್ ಶೆಟ್ಟಿ ಭಾಗವಹಿಸಲ್ಲಿದ್ದಾರೆ.


ಸರಿಗಮಪ ಗಾಯಕರಿಂದ ಗಾನಸಂಜೆ ಹಾಗೂ ಯಕ್ಷಗಾನ ನಾಟ್ಯ ವೈಭವ…


ಕಾರ್ಯಕ್ರಮವು ನಿಗದಿತ ಸಮಯದಲ್ಲಿ ಸಂಜೆ 4.00 ಘಂಟೆಗೆ ಸರಿಯಾಗಿ ಆರಂಭವಾಗಲ್ಲಿದ್ದು, ಸರಿಗಮಪ ಖ್ಯಾತಿಯ ಕಾರ್ತಿಕ್ ನಾಗಲಪುರ, ಸವಿಶ್ರೀ ಕುಂದಾಪುರ, ಆಮೀಶ್ ಕುಮಾರ್ ಇನ್ನಿತರ ಗಾಯಕ-ಗಾಯಕಿಯರಿಂದ ಗಾನಸಂಜೆ, 5.00 ಘಂಟೆಗೆ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರಿಂದ ಯಕ್ಷಗಾನ ನೃತ್ಯ ವೈಭವ ಹಾಗೂ ಇನ್ನಿತರ ಸಾಂಸ್ಕøತಿಕ ಕಾರ್ಯಕ್ರಮಗಳು ಇರುತ್ತವೆ.

ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರುಗಳಾದ ಡಾ. ಶೇಖರ್, ಡಾ. ಹಸೀನಾ, ಜಿ.ಡಿ.ಮಂಜುನಾಥ್,ಯು ಶಿವಾನಂದ ಶೆಟ್ಟಿ, ಜಿತೇಂದ್ರ, ಎಂ ಎಂ ಸ್ವಾಮಿ, ಪ್ರಸನ್ನ, ಎಂ ಸಿದ್ದರಾಮು, ಮಂಜುನಾಥ್.

Leave a Reply

Your email address will not be published. Required fields are marked *