ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದಿಂದ ಬೃಹತ್ ರಕ್ತದಾನ ಶಿಬಿರ ನಡೆಯಿತು.
ರೋಟರಿ ರಕ್ತನಿಧಿ ಕೇಂದ್ರ ಮತ್ತು ಆಶಾ ಜ್ಯೋತಿ ಬ್ಲಡ್ ಸೆಂಟರ್ ಸಹಯೋಗದಲ್ಲಿ ನಡೆಯುತ್ತಿರುವ ರಕ್ತದಾನ ಶಿಬಿರಕ್ಕೆ ಶಾಸಕರಾದ ಚನ್ನಬಸಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘವು ಮುಂಚಿಯಿಂದಲೂ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ.ಅಧ್ಯಕ್ಷರಾದ ಮಧುಕರ್ ಶೆಟ್ಟಿ ಮತ್ತು ಅವರ ತಂಡವು ಮಾಡುತ್ತಿರುವ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಅತಿಥಿಗಳಾಗಿ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಸಿ ಎಸ್ ಷಡಕ್ಷರಿ ಮತ್ತು ವಿಧಾನ ಪರಿಷತ್ ಶಾಸಕರಾದ ಡಿಎಸ್ ಅರುಣ್ ರವರು ಆಗಮಿಸಿದ್ದರು.
ನಂತರ 100 ಕೂ ಹೆಚ್ಚು ದಾನಿಗಳು ರಕ್ತವನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ಕಾರ್ಯದರ್ಶಿ ಮತ್ತು ಸಂಘದ ಸಮಸ್ತ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
