ಮಂಜುನಾಥ್ ಶೆಟ್ಟಿ…

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಕುಕ್ಕವಾಡ ಗ್ರಾಮದ ಕಲ್ಲೇಶ್ವರ ಬಡಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಮರ್ಥ್ ಶಾಮನೂರು ಅವರ ಪರವಾಗಿ ಮತಯಾಚನೆ ನಡೆಸಿದರು.
ರಾಜ್ಯ ಸರ್ಕಾರದ ಜನಪರ ಯೋಜನೆಗಳು ಹಾಗೂ ಕ್ಷೇತ್ರದ ಅಭಿವೃದ್ಧಿಯ ದೂರದೃಷ್ಟಿಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಬೆಂಬಲಿಸುವಂತೆ ಗ್ರಾಮದ ಪ್ರತಿ ಮನೆ ಮನೆಗೂ ಭೇಟಿ ನೀಡಿ ಮತಯಾಚನೆ ಮಾಡಲಾಯಿತು.
ಪ್ರಚಾರ ಕಾರ್ಯದಲ್ಲಿ ಶಿರಾ ಕ್ಷೇತ್ರದ ಶಾಸಕರು ಹಾಗೂ ದೆಹಲಿ ಸರ್ಕಾರದ ವಿಶೇಷ ಪ್ರತಿನಿಧಿಗಳಾದ ಶ್ರೀ ಟಿ.ಬಿ. ಜಯಚಂದ್ರ ಅವರು ಪಾಲ್ಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದರು. ಪ್ರಚಾರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಸ್ಥಳೀಯ ನಾಯಕರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದರು.
