ಮಂಜುನಾಥ್ ಶೆಟ್ಟಿ…

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್-ಡಿ ನೌಕರರಾದ ಕೀರ್ತಿ ಎಸ್ ಶೆಟ್ಟಿ ರವರ ಪುತ್ರಿ ನೇಹಾ.ಕೆ ಶೆಟ್ಟಿ ಇವರು ಪಿಯುಸಿ ಯಲ್ಲಿ ಉನ್ನತ ಶ್ರೇಣಿ(ಡಿಸ್ಟಿಂಕ್ಷನ್) ಪಡೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ವಿದ್ಯಾರ್ಥಿನಿಯನ್ನು ತಮ್ಮ ಕಚೇರಿಗೆ ಆಹ್ವಾನಿಸಿ ಆತ್ಮೀಯವಾಗಿ ಸನ್ಮಾನಿಸಿದರು.
ಕಲಾ ವಿಭಾಗದಲ್ಲಿ 600 ಅಂಕಗಳಿಗೆ 576 ಅಂಕಗಳನ್ನು ಪಡೆದ ನೇಹಾರನ್ನು ಜಿಲ್ಲಾಧಿಕಾರಿಗಳು ಅಭಿನಂದಿಸಿ, ಪೋಷಕರ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಮಗಳು ನೀಡಿದ್ದಾಳೆ. ಮಕ್ಕಳು ಇಂತಹ ಸಾಧನೆ ಮಾಡಿದಾಗ ಪೋಷಕರು ಹಾಗೂ ಶಿಕ್ಷಕರಿಗೆ ಹೆಮ್ಮೆಯಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿನಿಯ ಮುಂದಿನ ಉನ್ನತ ಶಿಕ್ಷಣಕ್ಕೆ ಶುಭ ಹಾರೈಸಿದರು.

ವಿಶೇಷವಾಗಿ ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಪರವಾಗಿ ಅಭಿನಂದನೆಗಳು.