ಮಂಜುನಾಥ್ ಶೆಟ್ಟಿ…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಅಧೀನದ ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಲ್ಲಿ ಆಯನೂರು ಸಮುದಾಯ ಆರೋಗ್ಯ ಕೇಂದ್ರ ಮತ್ತು ಸಾಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಖಾಲಿಯಿರುವ ಪ್ರಯೋಗಶಾಲಾ ತಂತ್ರಜ್ಞರ 2 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ನೇರ ಸಂದರ್ಶನಕ್ಕೆ ಕರೆ ನೀಡಲಾಗಿದೆ.


ಆಸಕ್ತರು ಏ.17 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 5.00ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ತಮ್ಮ ದಾಖಲೆಗಳ ಮೂಲಪ್ರತಿ ಮತ್ತು ಛಾಯಾಪ್ರತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ಎಸ್.ಎಸ್.ಎಲ್.ಸಿ. + ಪಿ.ಯು.ಸಿ. ಹಾಗೂ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಹೊಂದಿದ್ದು, 2 ವರ್ಷ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವವಿರಬೇಕು. ವಾರ್ಡ್ ಪ್ರೊಸೆಸ್ಸಿಂಗ್, ಡೇಟಾ ಪ್ರೊಸೆಸ್ಸಿಂಗ್ ನಂತರ ಕಂಪ್ಯೂಟರ್‌ನ ಮೂಲಭೂತ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಈ ನೇಮಕಾತಿಯು ಎನ್.ಹೆಚ್.ಎಂ ನಿಯಮಾವಳಿ, ಷರತ್ತು ಮತ್ತು ನಿಬಂಧನೆಗಳಿಗೆ ಮತ್ತು ಆಯ್ಕೆ ಸಮಿತಿಯ ತೀರ್ಮಾನಕ್ಕೆ ಒಳಪಟ್ಟಿರುತ್ತದೆ.