ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ನಗರದ ಅಲ್ಕೋಳ ಸರ್ಕಲ್‌ನಿಂದ ಡಿ.ವಿ.ಜಿ. ಸರ್ಕಲ್‌ವರೆಗೆ ಇರುವ ಶ್ರೀ ಎಸ್. ಬಂಗಾರಪ್ಪ ರಸ್ತೆಯಲ್ಲಿ, ಸಾರ್ವಜನಿಕ ವಾಹನಗಳು ಹಾಗೂ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ರಸ್ತೆಯ ಎರಡೂ ಬದಿಗಳ ಪುಟ್‌ಪಾತ್ ಹಾಗೂ ರಸ್ತೆಯ ಮೇಲಿಟ್ಟಿದ್ದ ತಿಂಡಿ ಗಾಡಿಗಳು ಮತ್ತು ಹಣ್ಣಿನ ಅಂಗಡಿಗಳನ್ನು ತೆರವುಗೊಳಿಸಲಾಯಿತು.
ಸಂಚಾರಿ ಪೊಲೀಸ್ ಸಿಪಿಐ ದೇವರಾಜ್ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳ ಸಹಕಾರದೊಂದಿಗೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಸಹಕಾರ ನೀಡಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.