ಮಂಜುನಾಥ್ ಶೆಟ್ಟಿ…

ಅಕ್ಷಯ ತೃತೀಯ ದಿನದಂದು ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆಗಳಿರುವುದರಿಂದ, ಇದನ್ನು ತಡೆಗಟ್ಟಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾಡಳಿತ ಸನ್ನದ್ಧವಾಗಿದೆ.


ಬಾಲ್ಯವಿವಾಹವು ಒಂದು ಗಂಭೀರ ಸಾಮಾಜಿಕ ಪಿಡುಗಾಗಿದ್ದು, ಇದು ಮಕ್ಕಳ ಸಾಮಾಜಿಕ, ಮಾನಸಿಕ, ದೈಹಿಕ ಹಾಗೂ ಆರ್ಥಿಕ ಬೆಳವಣಿಗೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ. ಅಕ್ಷಯ ತೃತೀಯದಂತಹ ಶುಭ ಮುಹೂರ್ತದ ದಿನಗಳಲ್ಲಿ ಬಾಲ್ಯವಿವಾಹಗಳು ಹೆಚ್ಚಾಗಿ ನಡೆಯುವ ಸಾಧ್ಯತೆಗಳಿದ್ದು, ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.


ದಿನಾಂಕ 20-04-2026 ರಂದು ವಿಶೇಷ ನಿಗಾ: ಏಪ್ರಿಲ್ 20 ರಂದು ಅಕ್ಷಯ ತೃತೀಯ ಆಚರಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಈ ದಿನದಂದು ನಡೆಯುವ ವಿವಾಹಗಳ ಮೇಲೆ ಹೆಚ್ಚಿನ ನಿಗಾ ಇರಿಸಲಾಗುವುದು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಬಾಲ್ಯವಿವಾಹ ಮಾಡುವುದು ಅಥವಾ ಅದಕ್ಕೆ ಪ್ರೇರಣೆ ನೀಡುವುದು ಕಾನೂನುಬಾಹಿರ ಎಂದು ಎಚ್ಚರಿಸಿದ್ದಾರೆ.


ಮಾಹಿತಿ ನೀಡಲು ಸಹಾಯವಾಣಿ…


ನಿಮ್ಮ ಸುತ್ತಮುತ್ತ ಎಲ್ಲಿಯಾದರೂ ಬಾಲ್ಯವಿವಾಹ ನಡೆಯುವ ಬಗ್ಗೆ ಮಾಹಿತಿ ಲಭಿಸಿದಲ್ಲಿ ಸರ್ಕಾರ ನೇಮಿಸಲ್ಪಟ್ಟ ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ವಾಥವಾ
ಮಕ್ಕಳ ಸಹಾಯವಾಣಿ: 1098
ಪೊಲೀಸ್ ಸಹಾಯವಾಣಿ: 112 ಕರೆ ಮಾಡಿ ಮಾಹಿತಿ‌ ನೀಡಬೇಕು.


ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು. ಬಾಲ್ಯವಿವಾಹಗಳನ್ನು ತಡೆಗಟ್ಟುವ ಮೂಲಕ ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಕೋರಿದ್ದಾರೆ.

Leave a Reply

Your email address will not be published. Required fields are marked *